ಮೈಸೂರು

ನಿಯಂತ್ರಣ ತಪ್ಪಿದ ಕಾರ್ ಪಲ್ಟಿ : ವಕೀಲ ಸಾವು

ಮೈಸೂರು,ಜೂ.16: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ವಕೀಲ ಸ್ಥಳಲ್ಲೇ ಸಾವನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ.

ವಕೀಲ ಬಾಲಕೃಷ್ಣ (42) ಮೃತ ದುರ್ದೈವಿ. ಕಾರಿನಲ್ಲಿ ಮೂರು ಮಂದಿ ಮೈಸೂರಿನಿಂದ ಹುಣಸೂರಿನ ಕಡೆಗೆ ಹೋಗುತ್ತಿದ್ದ ವೇಳೆ ಬಿಳಿಕೆರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ. ಪರಿಣಾಮ ಬಾಲಕೃಷ್ಣ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಹುಚ್ಚೇಗೌಡ ಹಾಗೂ ನಾರಾಯಣ್ ಗೆ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಪಿ.ಎಸ್ )

Leave a Reply

comments

Related Articles

error: