ದೇಶ

ಸಚಿವ ಸತ್ಯೇಂದ್ರ ಕುಮಾರ್ ಜೈನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ,ಜೂ.18-ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ಭಾನುವಾರ ಮಧ್ಯರಾತ್ರಿ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಯ ಲೋಕನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತ್ಯೇಂದ್ರ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ. ಅವರ ರಕ್ತದೊತ್ತಡ ಈಗ ಸಹಜ ಸ್ಥಿತಿಗೆ ಮರಳಿದೆ. ಸ್ವಲ್ಪ ಉಸಿರಾಟದ ಸಮಸ್ಯೆಗಳಿದ್ದರೂ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಡಾ.ಜೆ ಎಸ್ ಪಾಸೆ ಹೇಳಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ ಮಾಡಿದ್ದಾರೆ.

ಐಎಎಸ್ ಅಧಿಕಾರಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಚಿವರಾದ ಗೋಪಾಲ ರೈ, ಸತ್ಯೇಂದ್ರ ಕುಮಾರ್ ಜೈನ್ ಮುಂತಾದವರು ಕಳೆದ ಏಳು ದಿನಗಳಿಂದ ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರ ನಿವಾಸದಲ್ಲಿ ಧರಣಿ ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಬ್ಬರು ಶಾಸಕರು ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರೆಂಬ ವಿಷಯಕ್ಕೆ ಸಂಬಂಧಿಸಿದಂತೆ, ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆಂದು ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: