ಮೈಸೂರು

ಮಹಿಳೆಯರು ಸಂಘಟನೆಗಳ ಮೂಲಕ ಮುಖ್ಯವಾಹಿನಿಗೆ ಬರಬೇಕು: ಎಂ.ಮಹೇಶ್

ಮೈಸೂರು,(ಬೈಲಕುಪ್ಪೆ),ಜೂ.18-ಗ್ರಾಮೀಣ ಭಾಗದ ಮಹಿಳೆಯರು ಸ್ವ ಉದ್ಯೋಗ ಕೈಗೊಂಡು, ಸಂಘಟನೆಗಳ ಮುಖಾಂತರ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಪಿಎಸ್ಐ ಎಂ.ಮಹೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಆರಕ್ಷಕ ಠಾಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಹಿಳಾ ಸಂಘದವರಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನನ ದಿನಗಳಲ್ಲಿ ಮಹಿಳೆಯರು ಮತ್ತು ಬುಡಕಟ್ಟು ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಸಮಾಜವನ್ನು ಬೆಚ್ಚಿ ಬಿಳುಸುತ್ತಿವೆ. ಇಂತಹ ಪ್ರಕರಣಗಳನ್ನು ನಿಯಂತ್ರಿಸಬೆಕಾದರೆ ಪ್ರತಿಯೊಬ್ಬ ಮಹಿಳೆಯೂ ಕಾನೂನಿನ ಅರಿವನ್ನು ಪಡೆದುಕೊಳ್ಳಬೇಕು ಎಂದರು.

ಗ್ರಾಮೀಣ ಮಹಿಳೆಯರು ಕೇವಲ ಮನೆಗೆಲಸಕ್ಕೆ ಸೀಮಿತವಾಗದೇ ಸಂಘಟನೆ, ಶಿಕ್ಷಣದ ಮೂಲಕ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು. ಜತೆಗೆ ಸಂಘ ಸಂಸ್ಥೆಗಳ ಮೂಲಕ ಬದುಕು ಕಟ್ಟಿಕೊಳ್ಳಲು ಮಹಿಳೆಯರು ಆದಾಯ ಮೂಲಗಳನ್ನು ಕಂಡುಕೊಳ್ಳಬೇಕು. ಸಂಘಟನೆಗೆ ಸರ್ಕಾರದಿಂದ ದೊರೆಯುವ ಮೂಲ ಸೌಕರ್ಯ ಪಡೆದುಕೊಳ್ಳಬೇಕು. ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಮಹಿಳೆಯರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ಎಲ್ಲಾ ಮಹಿಳಾ ಸಂಘಟನೆಗಳು ಕೈ ಜೋಡಿಸಬೇಕು ಎಂದು ಹೇಳಿದರು.

ಮಹಿಳೆಯರು ತಾವು ಕೆಲಸ ಮಾಡುವ ಸ್ಥಳಗಳಲ್ಲಿ, ಮಾಲೀಕರು ಹಾಗೂ ಪುರುಷರು ಆಸೆ ಆಮೀಷಗಳನ್ನು ಹೂಡಿ ಅನೈತಿಕ ಸಂಬಂಧ ಕುರಿತಂತೆ ಪಿಡಿಸಿದರೆ ಸ್ಥಳಿಯ ಪೋಲಿಸರಿಗೆ ಮಾಹಿತಿ ನೀಡಬೇಕು. ಪ್ರಕರಣವನ್ನು ದಾಖಲಿಸಿಕೊಂಡು ಗುಪ್ತ ತನಿಖೆ ಮುಖಾಂತರ ಪೊಲೀಸರು ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಇಲಾಖೆ ಸಹಕಾರ ನೀಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜ್ಞಾನವಿಕ ಸಂಯೋಜಿಕ ಅಧಿಕಾರಿ ರೇವತಿ, ರೂಪ, ಜಸ್ಮಿನ್, ಮುಖ್ಯಪೇದೆ ಸೋಮಶೇಖರ್, ನಂದೀಶ್ ಇತರರು ಉಪಸ್ಥಿತರಿದ್ದರು. (ಆರ್.ಬಿ.ಆರ್, ಎಂ.ಎನ್)

Leave a Reply

comments

Related Articles

error: