
ದೇಶಪ್ರಮುಖ ಸುದ್ದಿ
ಮುತಾಲಿಕ್ ಕಾನೂನು ಉಲ್ಲಂಘಿಸಿದ್ದರೆ ಶಿಕ್ಷೆಯಾಗುತ್ತದೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು (ಜೂನ್ 18): ಮುತಾಲಿಕ್ ಆಗಲಿ, ಯಾರೇ ಆಗಲಿ ಕಾನೂನನ್ನು ಉಲ್ಲಂಘಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಕುರಿತು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ನೀಡಿದ ಹೇಳಿಕೆಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಏನನ್ನೂ ಹೇಳುವುದಕ್ಕೆ ಇಷ್ಟಪಡುವುದಿಲ್ಲ. ಮುತಾಲಿಕ್ ಆಗಲಿ, ಯಾರೇ ಆಗಲಿ. ಕಾನೂನನ್ನು ಉಲ್ಲಂಘಿಸುವವರು ಅಥವಾ ಅಕ್ರಮ ಚಟುವಟಿಕೆಗೆ ಬೆಂಬಲ ನೀಡುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.(ಎನ್.ಬಿ)