ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ವ್ಯಕ್ತಿಯ ಬಂಧನ : ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಇರ್ವಿನ್ ರಸ್ತೆಯ ನಿವಾಸಿ ರಾಮಲಾಲ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಪರಿಸರದಲ್ಲಿರುವ ವಸತಿಗೃಹವೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ವಸತಿಗೃಹಕ್ಕೆ ದಾಳಿ ನಡೆಸಿದ ಪೋಲಿಸರು ರಾಮಲಾಲ್ ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ದಾಳಿಯಲ್ಲಿ ಮೇಟಗಳ್ಳಿ ಸಬ್ ಇನ್ಸಪೆಕ್ಟರ್ ಸುನೀಲ್, ಸಿಬ್ಬಂದಿಗಳಾದ ಮಲ್ಲಿಕಾರ್ಜುನ್, ರವಿ ಪಾಲ್ಗೊಂಡಿದ್ದರು.

Leave a Reply

comments

Related Articles

error: