ದೇಶ

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ: ರಾಷ್ಟ್ರಪತಿ ಅಂಕಿತ

ನವದೆಹಲಿ,ಜೂ.20-ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಮುರಿದು ಬಿದ್ದ ಹಿನ್ನಲೆಯಲ್ಲಿ ಇಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಅಂಕಿತ ಹಾಕಿದ್ದಾರೆ.

ಮಂಗಳವಾರ ಬಿಜೆಪಿಯು ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆಯಿತು. ಮೈತ್ರಿ ಸರ್ಕಾರ ಪತನಗೊಂಡ ಕಾರಣ ಮುಖ್ಯ ಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ರಾಜ್ಯಪಾಲ ಎನ್‌.ಎನ್‌. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆ ರಾಷ್ಟ್ರಪತಿ ಅವರಿಗೆ ಶಿಫಾರಸು ಮಾಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಬಾರಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಬಂದಿದೆ. ಈ ಮೊದಲು 2008, 2015 ಮತ್ತು 2016ರಲ್ಲಿ ಜಮ್ಮು -ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿತ್ತು. (ಎಂ.ಎನ್)

Leave a Reply

comments

Related Articles

error: