ಮೈಸೂರು

ಕಲಾವಿದರ ಶ‍್ರೇಯೋಭಿವೃದ್ಧಿಗಾಗಿ ಸಂಘ: ಡಿ.14ರಂದು ಉದ್ಘಾಟನೆ

ಅಖಿಲ ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಮೈಸೂರು ನಗರ ಹಾಗೂ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯರಾಮರಾಜು ತಿಳಿಸಿದರು.

ಅವರು, ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಡಿ.14ರ ಸಂಜೆ 4 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸಂಘವನ್ನು ಉದ್ಘಾಟಿಸುವರು. ಮೇಲುಕೋಟೆ ವೈಂಗಾಪುರ ಇಳೈ ಆಳ್ವಾರ್ ಸ್ವಾಮೀಜಿ ಉಪಸ್ಥಿತರಿರುವರು. ಪ್ರಮತಿ ವಿದ್ಯಾ ಸಂಸ್ಥೆಯ ಹೆಚ್.ವಿ. ರಾಜೀವ್ ಅಧ‍್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷ ಎಂ.ಕೆ. ಸೋಮಶೇಖರ್, ಶಾಸಕ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ರಘು ಆಚಾರ್, ನಗರ ಪೊಲೀಸ್ ಆಯುಕ್ತ ಡಾ. ಸುಬ್ರಮಣ್ಯೇಶ್ವರ ರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚನ್ನಪ್ಪ ಹಾಗೂ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ. ಸಿದ್ದರಾಜು ಉಪಸ್ಥಿತರಿರುವರು ಎಂದು ತಿಳಿಸಿದರು. ಸಂಘದ ಸ್ಥಾಪನೆಯ ಧ್ಯೇಯ್ಯೋದ್ದೇಶಗಳನ್ನು ವಿಸ್ತೃತವಾಗಿ ವಿವರಿಸಿ ಕಲಾವಿದರ ಶ್ರೇಯೋಭಿವೃದ್ಧಿಗೆ ಹಾಗೂ ಒಗ್ಗಟ್ಟಿನ ಹೋರಾಟದಿಂದ ಸರ್ಕಾರದ ಗಮನ ಸೆಳೆದು ಸಂಘವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟಸ್ವಾಮಿ, ಖಜಾಂಚಿ ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ಅಶ‍್ವಿನ್ ಚಂದ್ರ ಹಾಗೂ ಬಿ. ಶ್ರೀಕಂಠರಾವ್ ಉಪಸ್ಥಿತರಿದ್ದರು.

Leave a Reply

comments

Related Articles

error: