ಪ್ರಮುಖ ಸುದ್ದಿಮೈಸೂರು

ಮೈಸೂರಿನಲ್ಲಿ ದಲೈಲಾಮ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಘಟಿಕೋತ್ಸವ ನಡೆಯಲಿದ್ದು, ಟಿಬೇಟಿಯನ್ ಧರ್ಮಗುರು ದಲೈಲಾಮ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮಂಗಳವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧರ್ಮಗುರು ದಲೈಲಾಮ ಸೋಮವಾರ ಮೈಸೂರಿಗೆ ಆಗಮಿಸಿದ್ದಾರೆ.

ಮೈಸೂರಿಗೆ ಆಗಮಿಸಿದ ದಲೈಲಾಮ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಇಲ್ಲಿನ ಗ್ರಾಂಡ್ ಮರ್ಕ್ಯೂರ್ ಹೋಟೆಲಿನಲ್ಲಿ ದಲೈಲಾಮ ವಾಸ್ತವ್ಯ ಹೂಡಿದ್ದು, ಹೋಟೆಲ್ ಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಮಂಗಳವಾರ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

Leave a Reply

comments

Related Articles

error: