ಮೈಸೂರು

ಉಚಿತ ನೇತ್ರ ತಪಾಸಣಾ ಶಸ್ತ್ರ ಚಿಕಿತ್ಸಾ ಶಿಬಿರ: ಡಿ.14

ಮೈಸೂರಿನ ಧಾನ್ ಫೌಂಡೇಷನ್, ವಿನಾಯಕ ಕ್ರೀಡಾ ಸಂಸ್ಥೆ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಿನಾಯಕ ಕ್ರೀಡಾ ಸಂಸ್ಥೆ ಕಾರ್ಯದರ್ಶಿ ಎಂ.ಕೆ. ರೇವಣ್ಣ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಡಿ.14ರ ಬುಧವಾರದಂದು ಅಶೋಕಪುರಂನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ಮಧ‍್ಯಾಹ್ನ 1ರವರೆಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ನೇತ್ರ ತಜ್ಞರಿಂದ ತಪಾಸಣೆ ಹಾಗೂ ಸಲಹೆ ನೀಡಲಾಗುವುದು. ಆಯ್ಕೆಯಾದವರಿಗೆ ಉಚಿತ ಊಟ, ಸಾರಿಗೆ ಸೇರಿದಂತೆ ಅಂದೇ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದ್ಯೊಯ್ದು ಶಸ್ತ್ರ ಚಿಕಿತ್ಸೆ ನಡೆಸಿ ಲೆನ್ಸ್ ಅಳವಡಿಸಲಾಗುವುದು. ರೋಗಿಗಳು ತಜ್ಞ ವೈದ್ಯರಿಂದ ಫಿಟ್‍ನೆಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ವಿಶೇಷ ಸೂಚನೆ: ಶಸ್ತ್ರ ಚಿಕಿತ್ಸೆಗೊಳಪಡುವರು ಫೋನ್ ನಂಬರ್, ರೇಷನ್ ಕಾರ್ಡ್, ಆಧಾರ ಕಾರ್ಡ್‍ ಅಥವಾ ಚುನಾವಣಾ ಕಾರ್ಡಿನ ಜೆರಾಕ್ಸ್ ಪ್ರತಿಯನ್ನು ತರಬೇಕು ಎಂದು ತಿಳಿಸಿದರು.

Leave a Reply

comments

Related Articles

error: