ಮೈಸೂರು

ಸಂಭ್ರಮದ ಹನುಮಾನ್ ಜಯಂತಿ ಆಚರಣೆ

hanuman-2ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಸಂಭ್ರಮದ ಹನುಮಾನ್ ಜಯಂತಿಯನ್ನು ಆಚರಿಸಲಾಯಿತು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಚನ್ನಣ್ಣನವರ್ ಅವರ ಭದ್ರತೆಯ ನಡುವೆ ಏಳು ಸಾವಿರಕ್ಕೂ ಅಧಿಕ  ಭಕ್ತರು ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ನೋಡುಗರ ಕಣ್ಮನ ಸೆಳೆಯಿತು. ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿದ್ದವು. ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹನುಮ ಜಯಂತಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಎರಡು ಸಾವಿರ ಪೊಲೀಸರು ಹುಣಸೂರು ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Leave a Reply

comments

Related Articles

error: