ಮೈಸೂರು

ಇಂದಿನಿಂದ 28ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇಧಾಜ್ಞೆ      

ಮೈಸೂರು.ಜೂ.21 :ಮೈಸೂರು  ನಗರದಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂ 21 ರಿಂದ 28 ರವರೆಗೆ  16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.  ಈ  ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಪರೀಕ್ಷೆಯು ಸುಗಮವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ  ನಿಷೇದಿತ ಪ್ರದೇಶವೆಂದು ಘೋಷಿಸಿ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ. ಎ. ಸುಬ್ರಮಣ್ಯೇಶ್ವರರಾವ್ ಅವರು ಆದೇಶ ಹೊರಡಿಸಿದ್ದಾರೆ.
ಕಲಂ 144ರ ಅನ್ವಯ ಹೊರಡಿಸಿದ ಈ ಆದೇಶದನ್ವಯ ದಿನಾಂಕ 21 ರಿಂದ 28 ರವರೆಗೆ  ದಿನದಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 16 ಕೇಂದ್ರಗಳ ಪ್ರದೇಶಗಳಲ್ಲಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದೆಂದು ಹಾಗೂ ಪರೀಕ್ಷಾ ಕೇಂದ್ರದ ಬಳಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: