ದೇಶ

ಟ್ರ್ಯಾಕ್ಟರ್-ಬೊಲೆರೋ ನಡುವೆ ಡಿಕ್ಕಿ: 12 ಮಂದಿ ದುರ್ಮರಣ; 8 ಮಂದಿಗೆ ಗಾಯ

ಮಧ್ಯಪ್ರದೇಶ,ಜೂ.21- ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಮತ್ತು ಬೊಲೆರೋ ಎಸ್ ಯುವಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಬೊಲೆರೋ ಎಸ್ ಯುವಿ ವಾಹನದಲ್ಲಿದ್ದವರು ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆಂದು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಅಂಬಾ ಪಟ್ಟಣಕ್ಕೆ ಟ್ರ್ಯಾಕ್ಟರ್ ತೆರಳುತ್ತಿದ್ದ ವೇಳೆ ಗಂಜ್ ರಾಮ್ ಪುರ್ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಮೃತರಲ್ಲಿ ಹೆಚ್ಚಿನವರು ಗ್ವಾಲಿಯರ್ ನ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.

ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನೂ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್ ಚಾಲಕ ಹಾಗೂ ಉಳಿದ 8 ಮಂದಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಬೊಲೊರೋ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಮೊರೆನಾದ ಎಸ್ಪಿ ಅಮಿತ್ ಸಾಂಘ್ವಿ ಹೇಳಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದವರು ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: