ಸುದ್ದಿ ಸಂಕ್ಷಿಪ್ತ

ಕಾರ್ಯನಿರತ ಪತ್ರಕರ್ತರಿಗಾಗಿ ಕಣ್ಣಿನ ಉಚಿತ ತಪಾಸಣೆ ಶಿಬಿರ

ಮೈಸೂರು ಜಿಲ್ಲಾ ಕಾರ್ಯನಿರತ ಪರ್ತಕರ್ತರು ಹಾಗೂ ಅವರ ಕುಟುಂಬದವರಿಗಾಗಿ ನಗರದ ಶ್ರೀ ಭಗವಾನ್ ಮಹಾವೀರ್ ದರ್ಶನ್ ಕಣ್ಣಿನ ಆಸ್ಪತ್ರೆ ವತಿಯಿಂದ ಡಿ.14 ಬುಧವಾರ ಹಾಗೂ 15 ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ಪತ್ರಕರ್ತರ ಭವನದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಆಸ್ಪತ್ರೆಯ ತಜ್ಞವೈದ್ಯರಾದ ಡಾ. ಶ್ರೀನಿವಾಸಮೂರ್ತಿ ಅವರ ನೇತೃತ್ವದಲ್ಲಿ ತಜ್ಞವೈದ್ಯರು ಮತ್ತು ತಾಂತ್ರಿಕ ಪರಿಣತರ ತಂಡ ಪತ್ರಕರ್ತರಿಗೆ ತಪಾಸಣೆ ನಡೆಸಲಿದೆ.

ಕಣ್ಣಿಗೆ ಸಂಬಂಧಿಸಿದ ಎಲ್ಲ ಬಗೆಯ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು. ಕನ್ನಡಕದ ಅವಶ್ಯಕತೆ ಕಂಡುಬಂದಲ್ಲಿ ಶೇ. 35ರ ರಿಯಾಯಿತಿ ದರದಲ್ಲಿ ಕನ್ನಡಕ ನೀಡಲು ಆಸ್ಪತ್ರೆಯ ಆಡಳಿತ ಮಂಡಳಿ ಒಪ್ಪಿದೆ. ಶಸ್ತ್ರಚಿಕಿತ್ಸೆಯನ್ನೂ ರಿಯಾಯಿತಿ ವೆಚ್ಚದಲ್ಲಿ ನಡೆಸಲಾಗುವುದು. ಸಂಘದ ಸದಸ್ಯರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು ಮನವಿ ಮಾಡಿದ್ದಾರೆ.

Leave a Reply

comments

Related Articles

error: