ಪ್ರಮುಖ ಸುದ್ದಿ

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಟ್ಟರೆ ಬಿಜೆಪಿ ಹೋರಾಟ : ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಕೆ

ಟಿಪ್ಪು ಹೆಸರಿಟ್ಟರೇ ಕಳಂಕ ಅಂದ್ರು ಆರ್.ಅಶೋಕ್, ಟಿಪ್ಪು ಹೆಸರಿಟ್ಟರೆ ತಪ್ಪೇನು ಇಲ್ಲ ಅಂತಾರೆ ಸಚಿವ ಜಮೀರ್

ರಾಜ್ಯ(ಬೆಂಗಳೂರು)ಜೂ.22:- ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಜೆಪಿ ವಿರೋಧಿಸುತ್ತದೆ. ಒಂದು ವೇಳೆ ಟಿಪ್ಪು ಹೆಸರಿಟ್ಟರೆ ಬಿಜೆಪಿ ಹೋರಾಟ ಮಾಡುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಶೋಭಾಕರಂದ್ಲಾಜೆ, ಟಿಪ್ಪು ಹೆಸರಿನಲ್ಲಿ ರಾಜಕೀಯ ಮಾಡಿದವರು ನಾಶವಾಗಿದ್ದಾರೆ. ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದಿದ್ದರಿಂದ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದಿದೆ. ಇದೀಗ ಜಮೀರ್ ಹಜ್ ಭವನಕ್ಕೆ ಟಿಪ್ಪು ಜಯಂತಿ ಹೆಸರಿಡಲು ಹೋಗಿ ಕಾಂಗ್ರೆಸ್ ಸರ್ವನಾಶಕ್ಕೆ ನಾಂದಿ ಹಾಡುತ್ತಿದ್ದಾರೆ. ಟಿಪ್ಪು ಹೆಸರಿಡಲು ಮುಂದಾದರೇ ಬಿಜೆಪಿ ಉಗ್ರ ಹೋರಾಟ ಮಾಡುತ್ತೆ ಎಂದು ಹೇಳಿದರು.

ಟಿಪ್ಪು ಹೆಸರಿಟ್ಟರೇ ಕಳಂಕ : ಆರ್.ಅಶೋಕ್

ಹಾಗೆಯೇ ಹಜ್ ಭವನಕ್ಕೆ ಟಿಪ್ಪು ಹೆಸರಿಡಲು ವಿರೋಧ ವ್ಯಕ್ತಪಡಿಸಿರುವ ಶಾಸಕ ಆರ್. ಅಶೋಕ್, ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೇ ಕಳಂಕವಾಗುತ್ತೆ.  ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಜ್ ಭವನಕ್ಕೆ 50 ಕೋಟಿ ಅನುದಾನ ನೀಡಿದ್ದರು. ಈಗ ಬಿಜೆಪಿಯ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯ ಅದನ್ನು ಹೈಜಾಕ್ ಮಾಡಿ ಈಗ ಟಿಪ್ಪು ಹೆಸರಿಡಲು ಮುಂದಾಗಿದೆ ಎಂದು ಆರೋಪಿಸಿದರು.

ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ ತಪ್ಪೇನು ಇಲ್ಲ: ಸಚಿವ ಜಮೀರ್ ಅಹ್ಮದ್ ಖಾನ್

ಇದಕ್ಕೂ ಮುನ್ನ ಮಾತಾನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಮನವಿಗಳು ಬಂದಿದ್ದು ಈ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಹಜ್ ಭವನ ಸ್ವತಂತ್ರ ಸಂಸ್ಥೆಯಾಗಿದ್ದು, ಟಿಪ್ಪು ಸುಲ್ತಾನ್ ಹೆಸರಿಟ್ಟರೆ ತಪ್ಪಿಲ್ಲ. ಬಿಜೆಪಿಯವರು ವಿರೋಧಿಸುವ ಸಾಧ್ಯತೆ ಇಲ್ಲ ಅಂದುಕೊಳ್ಳುತ್ತೇನೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: