ಮೈಸೂರು

ಯಶಸ್ವಿಯಾಗಿ ನಡೆದ ಮೈಸೂರು ವಿವಿ ವಿಶೇಷ ಸಭೆ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾಂಗಣದಲ್ಲಿ ಮಂಗಳವಾರ ವಿಶ್ವವಿದ್ಯಾನಿಲಯದ 97ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಮಂಗಳವಾರ ಬೆಳಿಗ್ಗೆ ಘಟಿಕೋತ್ಸವದ ಪೂರ್ವಭಾವಿಯಾಗಿ ಶಿಕ್ಷಣ ಮಂಡಳಿಯ ವಿಶೇಷ ಸಭೆಯನ್ನು ಆಯೋಜಿಸಲಾಗಿದ್ದು,  ಯಶಸ್ವಿಯಾಗಿ ನಡೆಯಿತು.

ವಿಶ್ವವಿದ್ಯಾನಿಲಯದ ಕುಲಪತಿ.ಪ್ರೊ.ಕೆ.ಎಸ್.ರಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ 97ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವ ಗಣ್ಯ ವ್ಯಕ್ತಿಗಳ ಹೆಸರುಗಳನ್ನು ಸರ್ವ ಸದಸ್ಯರ ಅವಗಾಹನೆಗೆ ತಂದು ಅನುಮೋದನೆ ಪಡೆಯಲಾಯಿತು.

ಘಟಿಕೋತ್ಸವದಲ್ಲಿ ವಿವಿಧ ಪದವಿಗಳನ್ನು ಪ್ರದಾನಿಸುವ ಕುರಿತು ಅಭ್ಯರ್ಥಿಗಳ ಪಟ್ಟಿ ಮಂಡಿಸಿ ಅನುಮೋದನೆ ಪಡೆಯಲಾಯಿತು.

ಸಭೆಯಲ್ಲಿ ಶಿಕ್ಷಣ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: