ಮೈಸೂರು

ಎನ್.ಎಸ್.ಎಸ್.ವಾರ್ಷಿಕ ಶಿಬಿರ : ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ಶಿಬಿರ

ಮೈಸೂರು ಮಕ್ಕಳ ಕೂಟ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಂಗವಾಗಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಡಿ.15ರ ಗುರುವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1.30ರವರೆಗೆ ಶ್ರೀಮಹದೇಶ್ವರ ಕನ್ವೆನ್‍ಷನ್ ಹಾಲ್‍ನಲ್ಲಿ ನಡೆಯಲಿದ್ದು. ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆ ಮತ್ತು ನೇತ್ರಧಾಮ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ಜರುಗಲಿದ್ದು, ಶಿಬಿರವನ್ನು ಯುವ ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸುನೀಲ್ ಬೋಸ್ ಉದ್ಘಾಟಿಸುವರು. ಶಿಬಿರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ನಡೆಸಲಾಗುವುದು.

Leave a Reply

comments

Related Articles

error: