ಸುದ್ದಿ ಸಂಕ್ಷಿಪ್ತ
ವಾಯು ಮಾಲಿನ್ಯ ಮಾಪನ ಸಂಚಾರಿ ವಾಹನದ ಉದ್ಘಾಟನೆ ‘ಡಿ.14’
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿವತಿಯಿಂದ ಡಿ.14ರಂದು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಾಹನಗಳ ವಾಯು ಮಾಲಿನ್ಯ ಮಾಪನ ಮಾಡುವ ಸಂಚಾರಿ ವಾಹನದ ಉದ್ಘಾಟನಾ ಕಾರ್ಯಕ್ರಮವನ್ನು ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಮತ್ತು ಸಾರಿಗೆ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ನ್ಯಾಯಾಧೀಶರ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್, ಜಿಲ್ಲಾಧಿಕಾರಿ ರಂದೀಪ್, ಮಹಾಪೌರ ಎಂ.ಜೆ.ರವಿಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.