ಮೈಸೂರು

ಮಕ್ಕಳಿಲ್ಲವೆಂದು ಮನನೊಂದ ಗೃಹಿಣಿ ಆತ್ಮಹತ್ಯೆ

ಮೈಸೂರು,ಜೂ.25:- ವಿವಾಹವಾಗಿ ಹಲವು ವರ್ಷಗಳಾದರೂ ತನಗೆ ಮಕ್ಕಳಾಗಿಲ್ಲವೆಂದು  ಮನನೊಂದ ಗೃಹಿಣಿಯೋರ್ವರು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತರನ್ನು ಶೋಭಾ (27) ಎಂದು ಗುರುತಿಸಲಾಗಿದ್ದು, ಮೂಲತಃ ಹೆಚ್.ಡಿ.ಕೋಟೆ ತಾಲೂಕು ಗಂಗಡಹೊಸಳ್ಳಿ ಗ್ರಾಮದ ಶೋಭಾರನ್ನು ಕಳೆದ ಎಂಟು ವರ್ಷಗಳ ಹಿಂದೆ ರಘುನಾಯ್ಕ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಶೋಭಾ ಸುಮಂಗಲಿ ಸಿಲ್ಕ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಮಕ್ಕಳಾಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಜಾರಿದ್ದ ಶೋಭಾ ಮನನೊಂದು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: