ಕರ್ನಾಟಕ

ಮಂಡ್ಯ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಹುದ್ದೆ ಭರ್ತಿ: ಅರ್ಜಿ ಆಹ್ವಾನ

ಮಂಡ್ಯ (ಜೂನ್ 23): ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದಲ್ಲಿ ಖಾಲಿಯಿರುವ 8 ಶೀಘ್ರಲಿಪಿಗಾರರ ಹಾಗೂ 12 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಹಿತಿ ಹಾಗೂ ಅರ್ಜಿ ನಮೂನೆಯು ಕಛೇರಿಯ ವೆಬ್‍ಸೈಟ್ ವಿಳಾಸ http://ecourts.gov.in/mandya ದಲ್ಲಿ ಲಭ್ಯವಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 18 ರ ಸಂಜೆ 4 ಗಂಟೆಯ ಒಳಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಇಲ್ಲಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಎನ್.ಬಿ)

Leave a Reply

comments

Related Articles

error: