ಮೈಸೂರು

ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರಕ್ಕೆ ಚಾಲನೆ

ಮೈಸೂರು,ಜೂ.25:- ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಫೌಂಡೇಷನ್,ಮೈಸೂರು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ,ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್, ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಫೌಂಡೇಷನ್ ನ ಮೊದಲ ಸೇವಾ ಕಾರ್ಯಕ್ರಮವಿದಾಗಿದ್ದು, ಸಿದ್ಧಾರ್ಥ ಲೇಔಟ್ ನಲ್ಲಿರುವ ಮೈಸೂರು ರೇಸ್ ಕ್ಲಬ್ ಕಣ್ಣಿನ ಆಸ್ಪತ್ರೆಯಲ್ಲಿಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತ್ರ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಹಾಗೂ ದೀಪಬೆಳಗಿಸಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.

ಈ ಸಂದರ್ಭ 250 ಮಂದಿಗೆ ತಪಾಸಣೆ ಮಾಡಲಾಗಿದ್ದು, 70 ರಿಂದ 80 ಜನಕ್ಕೆ ಶಸ್ತ್ರ ಚಿಕಿತ್ಸೆಗೆ ಸೂಚಿಸಲಾಗಿದೆ. ಈ ಸಂದರ್ಭ ಎಂ ಆರ್ ಸಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಿ.ವೆಂಕಟೇಶ್, ಆಸ್ಪತ್ರೆ ಸಮಿತಿಯ ಅಧ್ಯಕ್ಷ ಜಿ.ಕೆ.ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: