ಕರ್ನಾಟಕಪ್ರಮುಖ ಸುದ್ದಿ

ಕಾನೂನು ಪದವೀಧರರಿಗೆ ನ್ಯಾಯಾವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

ಹಾಸನ (ಜೂನ್ 23): ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕಡಿಮೆ ಅರ್ಜಿಗಳು ಬಂದಿರುವ ಕಾರಣ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ವಿಧಾನ: ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಗೆ ಭೇಟಿ ನೀಡಿ, ಅರ್ಜಿಗಳು/Applications  ಲಿಂಕ್ ಕ್ಲಿಕ್ ಮಾಡಿ SOCIAL EMPOWERMENT SCHEMES ಲಿಂಕ್ ಕ್ಲಿಕ್ ಮಾಡಿ ಪರಿಶಿಷ್ಟ ಜಾತಿ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಅರ್ಜಿ ನೋಂದಣಿ (STIPEND TO LAW GRADUATES) ಲಿಂಕ್ ಕ್ಲಿಕ್ ಮಾಡಿ. ನೋಂದಣಿ ಪ್ರಕ್ರಿಯೆ/Registration process ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಸರಿಯಾದ ಮಾಹಿತಿಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಿ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2018

ನಿಬಂಧನೆಗಳು: ಅಭ್ಯರ್ಥಿಗಳು ಪ.ಜಾತಿ/ಪ.ವರ್ಗದವರಾಗಿರಬೇಕು. ಜಾತಿ ಪತ್ರದ ದೃಢೀಕೃತ ಪ್ರತಿಯನ್ನು ಲಗತ್ತಿಸುವುದು. ಹಾಸನ ಜಿಲ್ಲೆಯವರಾಗಿದ್ದು, ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವವರು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿ 2 ವರ್ಷ ಮೀರಿರಬಾರದು ಪದವಿ ಪಡೆದು 2 ವರ್ಷ ಮೀರಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಯೊಂದಿಗೆ ಈ ಬಗ್ಗೆ ಕಾನೂನು ಪದವಿಯ ಅಂಕಪಟ್ಟಿಗಳ ದೃಢೀಕೃತ ಪ್ರತಿಯನ್ನು ಲಗತ್ತಿಸುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ನ್ಯಾಯಾಂಗ ಆಡಳಿತ ತರಬೇತಿಯನ್ನು ಸರ್ಕಾರಿ ವಕೀಲರು ಮತ್ತು 20 ವರ್ಷಗಳ ಅನುಭವ ಹೊಂದಿರುವ ಹಿರಿಯ ವಕೀಲರ ಅಧೀನದಲ್ಲಿ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.5000/-ಗಳ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು. (ಎಸ್.ಎಸ್.ಎಲ್.ಸಿ. ಅಂಕಪಟ್ಟಿಯನ್ನು ಅಪ್‍ಲೋಡ್ ಮಾಡಬೇಕು) ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಒದಗಿಸಿದ್ದಲ್ಲಿ ಅಂತಹವರನ್ನು ಕಾನೂನಿನ ಪ್ರಕಾರ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ತರಬೇತಿಯನ್ನು ಮಧ್ಯೆ ಬಿಟ್ಟು ಹೋದಲ್ಲಿ ಅವರಿಗೆ ನೀಡಿದ ತರಬೇತಿ ಭತ್ಯೆಯ ಜೊತೆಗೆ ಶೇ.10 ರಷ್ಟು ಬಡ್ಡಿ ಸೇರಿಸಿ ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ವಸೂಲಿ ಮಾಡಲಾಗುವುದು. ಈ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳು ಕರಾರು ಪತ್ರವನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹಾಸನ ಇವರಿಗೆ ಬರೆದುಕೊಡತಕ್ಕದ್ದು.

ಅನರ್ಹ ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕು ಸಮಿತಿಗೆ ಇರುತ್ತದೆ. ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿರಬೇಕು. ಬಾರ್ ಕೌನ್ಸಿಲ್ ಫಾರಂನ್ನು ಅಪ್‍ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹಾಸನ ಜಿಲ್ಲೆ, ಹಾಸನ ರವರ ಕಚೇರಿಯನ್ನು ಸಂಪರ್ಕಿಸುವುದು.

ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 15 ದಿವಸಗಳ ಕಾಲಾವಕಾಶ ನೀಡಿ ಒಪ್ಪಿಗೆ ಪತ್ರ ನೀಡಲು ಸೂಚಿಸಲಾಗುವುದು. 15 ದಿನಗಳೊಳಗೆ ಒಪ್ಪಿಗೆಯ ಕರಾರು ಪತ್ರವನ್ನು ಸಲ್ಲಿಸದೇ ಇದ್ದಲ್ಲಿ ಅಂಥವರ ಆಯ್ಕೆಯನ್ನು ರದ್ದುಪಡಿಸಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಬೇರೆ ಯಾವುದೇ ಇಲಾಖೆಯಿಂದ ಕಾನೂನು ತರಬೇತಿ ಭತ್ಯೆಯನ್ನು ಪಡೆಯುತ್ತಿಲ್ಲವೆಂದು ಪ್ರಮಾಣ ಪತ್ರ ನೀಡುವುದು. ಅಭ್ಯರ್ಥಿಯ ವಾರ್ಷಿಕ ಆದಾಯ ರೂ 2.00 ಲಕ್ಷಗಳು(ಎರಡು ಲಕ್ಷಗಳು)ಮೀರಿರಬಾರದು. ಚಾಲ್ತಿ ವರ್ಷದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು. (ಎನ್.ಬಿ)

Leave a Reply

comments

Related Articles

error: