ಕರ್ನಾಟಕ

ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ದಾಳಿ: 80 ಲೋಡ್ ಮರಳು ವಶ

ಮಂಗಳೂರು,ಜೂ.25-ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 80 ಲೋಡ್ ನಷ್ಟು ಮರಳನ್ನು ವಶಪಡಿಸಿಕೊಂಡಿದ್ದಾರೆ.

ತಿರುವೈಲ್‌ ಗ್ರಾಮದ ದೇವರಪದವಿ ಖಾಸಗಿ ಜಾಗದಲ್ಲಿ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರ ಸಿಬ್ಬಂದಿ ಜಂಟಿ ದಾಳಿ ನಡೆಸಿ 80 ಲೋಡ್‌ ನಷ್ಟು ಮರಳು ವಶ ಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಲಾಗಿದೆ. (ಕೆಸಿಐ, ಎಂ.ಎನ್)

Leave a Reply

comments

Related Articles

error: