ಕರ್ನಾಟಕ

ಮಂಗಳೂರು: ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

ಮಂಗಳೂರು,ಜೂ.25-ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಡುಗ್ರಾಮದಲ್ಲಿ ನಡೆದಿದೆ.

ದಡ್ಡಲಕಾಡು ಸಮೀಪದ ಪವಾರಿಪಲ್ಲ ನಿವಾಸಿ ಪವಿತ್ರಾ(20 ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಡುಗೆ ಕೋಣೆಯಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅನಾಥೆಯಾಗಿದ್ದ ಪವಿತ್ರಾ ಅಜ್ಜಿ ಮತ್ತು ಮಾನವ ಜೊತೆಯಲ್ಲಿ ವಾಸವಾಗಿದ್ದಳು. ಪವಿತ್ರಾ ಇತ್ತೀಚೆಗೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆಸಿಐ, ಎಂ.ಎನ್)

Leave a Reply

comments

Related Articles

error: