ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು,ಜೂ.25:-  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯದಲ್ಲಿ 2018-19ನೇ ಶೈಕ್ಷಣಿಕ ವರ್ಷಕ್ಕಾಗಿ 6ನೇ ತರಗತಿಯಿಂದ 12ನೇ ತರಗತಿಯವರಿಗೆ ಮತ್ತು ಡಿಪ್ಲೊಮಾ ಓದುತ್ತಿರುವ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಮತ್ತು ಅವಲಂಬಿತರ ಗಂಡು ಮಕ್ಕಳಿಗೆ ಆದ್ಯತೆ ಹಾಗೂ ಅರ್ಹತೆ ಮೇರೆಗೆ ಉಚಿತ ಪ್ರವೇಶವನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಮೈಸೂರು ನಗರದ ಸುತ್ತ ಮುತ್ತಲಿನ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದವರಿಗೆ ನಿಲಯದಲ್ಲಿ ಪ್ರವೇಶ ನೀಡಲಾಗುವುದು.ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪ, ಜೆ.ಎಲ್.ಬಿ. ರಸ್ತೆ, ಮೈಸೂರು-570005 ಇವರಿಂದ ಕಾರ್ಯಾಲಯದ ಕೆಲಸದ ದಿನಗಳಲ್ಲಿ ಪಡೆದುಕೊಳ್ಳಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 09 ಜುಲೈ 2018 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2425240 ಸಂಪರ್ಕಿಸಬಹುದಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: