
ಪ್ರಮುಖ ಸುದ್ದಿ
ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯ ಹೆಚ್ಚಾಗಲು ಅಧಿಕಾರಿಗಳೇ ಕಾರಣ : ಪ್ರಧಾನ ಕಾರ್ಯದರ್ಶಿ ರತ್ನಪ್ರಭ ಬೇಸರ
ರಾಜ್ಯ(ಬೆಂಗಳೂರು)ಜೂ.26:- ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯ ಹೆಚ್ಚಾಗಲು ಅಧಿಕಾರಿಗಳೇ ಕಾರಣ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ರತ್ನಪ್ರಭ ಬೇಸರ ವ್ಯಕ್ತ ಪಡಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿ ರತ್ನಪ್ರಭ ಅವರು ಟ್ವೀಟರ್ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಮಾಫಿಯಾ ಹೆಚ್ಚಾಗಲು ಅಧಿಕಾರಿಗಳೇ ಕಾರಣ ಲೋಪದೋಷಗಳನ್ನು ಸರಿಪಡಿಸುವಲ್ಲಿ ಸರಿಯಾದ ಸಮಯದಲ್ಲಿ ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಇದರಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಮಾಫಿಯಾ ಹೆಚ್ಚಾಗಿದೆ ಎಂದು ಬರೆದಿದ್ದಾರೆ.
ಪ್ರಧಾನ ಕಾರ್ಯದರ್ಶಿಯವರ ಬಹಿರಂಗ ಟ್ವೀಟ್ ಈಗ ಅಚ್ಚರಿ ಮೂಡಿಸಿದ್ದು, ಉನ್ನತ ಹುದ್ದೆಯಲ್ಲಿರುವವರೇ ಹೀಗೆ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ ಎಂಬ ಪ್ರಶ್ನೆ ಎದುರಾಗಿದೆ.
ಶಿಕ್ಷಣ ಉಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪಿಯು ಮಂಡಳಿ ನಿರ್ದೇಶಕಿ ಶಿಖಾ ಅವರು ಸಚಿವರ ಎದುರೇ ಸಭೆಯಲ್ಲಿ ಕಿತ್ತಾಡಿಕೊಂಡಿದ್ದು ಇನ್ನೂ ಮಾಸುವ ಮುನ್ನವೇ ಪ್ರಧಾನ ಕಾರ್ಯದರ್ಶಿ ರತ್ನಪ್ರಭ ಅವರ ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. (ಕೆ.ಎಸ್,ಎಸ್.ಎಚ್)