
ಕರ್ನಾಟಕ
ಮಂಡ್ಯದಲ್ಲಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ
ಮಂಡ್ಯ (ಜೂನ್ 25): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ನಡೆಸಿಕೊಡಲಿದ್ದು, ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕರಾದ ಎಂ.ಶ್ರೀನಿವಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಶ್ರೀಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸುವರು.
ಜೂನ್ 27 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಿಂದ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಲಾಮಂದಿರದಲ್ಲಿ ಸಮಾವೇಶಗೊಳ್ಳುವುದು. ಕೆ.ವಿ.ಶಂಕರೇಗೌಡ ಬಿ.ಎಡ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಎಸ್.ಬಿ.ಶಂಕರೇಗೌಡ ಅವರು ಉಪನ್ಯಾಸ ನೀಡುವರು. ಶಿವಾರ ಉಮೇಶ್ ಮತ್ತು ತಂಡದವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ. (ಎನ್.ಬಿ)