ಪ್ರಮುಖ ಸುದ್ದಿ

ಪ್ಲಾಸ್ಟಿಕ್ ಬ್ಯಾನ್ ನಲ್ಲಿ ಕಾಂಡೋಮ್ ಕೂಡ ಸೇರಿದೆಯಾ ನಟಿ ಪೂನಂ ಪಾಂಡೆ ಟ್ವೀಟ್

ದೇಶ(ಮುಂಬೈ)ಜೂ.27:- ಸದಾ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುವ ಮಾಡೆಲ್, ನಟಿ ಪೂನಂ ಪಾಂಡೆ ಸದ್ಯ ಮಹಾರಾಷ್ಟ್ರ ಸರ್ಕಾರ ಕೈಗೊಂಡಿರುವ ಪ್ಲಾಸ್ಟಿಕ್ ಬ್ಯಾನ್ ನಲ್ಲಿ ಕಾಂಡೋಮ್ ಕೂಡ ಸೇರಿದೆಯಾ ಎಂದು ಪ್ರಶ್ನಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಜಸ್ಟ್ ಆಸ್ಕಿಂಗ್ ಎಂದು ಟ್ವೀಟ್ ಮಾಡಿರುವ ನಟಿ ಪೂನಂ ಪಾಂಡೆ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಕೂಡ ಸೇರಿದೆಯಾ ಎಂದು ಬರೆದುಕೊಂಡಿದ್ದಾರೆ.

ಸದ್ಯ ಮಹಾರಾಷ್ಟ್ರದ ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಪೂನಂ ಪಾಂಡೆ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಈ ಹಿಂದೆಯೂ ಮಹಾರಾಷ್ಟ್ರ ಸರ್ಕಾರದ ಪ್ಲಾಸ್ಟಿಕ್ ಬ್ಯಾನ್ ಕುರಿತು ಟ್ವೀಟ್ ಮಾಡಿದ್ದ ಪೂನಂ, ಪ್ಲಾಸ್ಟಿಕ ನಿಷೇಧವಾಗಿದೆ, ಯಾರು ಯಾರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದೀರೋ ಅವರೆಲ್ಲಾ ರಸ್ತೆಯಲ್ಲಿ ತಿರುಗಾಡಬೇಡಿ ಎಂದು ಟ್ವೀಟ್ ಮಾಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: