ಮೈಸೂರು

ವಿಶ್ವ ಗೃಹ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೀದಿನಾಟಕ ಪ್ರದರ್ಶನ

ಮೈಸೂರು,ಜೂ.27:- ವಿಶ್ವ ಗೃಹ ಕಾರ್ಮಿಕರ ದಿನಾಚರಣೆಯ ಅಂಗವಾಗಿ ನಗರದಲ್ಲಿ ಮೈಸೂರು ಗೃಹ ಕಾರ್ಮಿಕರ ಟ್ರೇಡ್ ಯೂನಿಯನ್ ವತಿಯಿಂದ ಜಾಥಾ, ಬೀದಿನಾಟಕ ಮತ್ತು ಸಭಾ ಕಾರ್ಯಕ್ರಮ ನಡೆಯಿತು.

ಇಂದು ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಬಳಿಯಿಂದ ಮೈಸೂರು ಗೃಹ ಕಾರ್ಮಿಕರ ಟ್ರೇಡ್ ಯೂನಿಯನ್ ವತಿಯಿಂದ ಜಾಥಾಕ್ಕೆ ಚಾಲನೆ ನೀಡಲಾಗಿದ್ದು, ಜಾಥಾವು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟು ಗಾಂಧಿ ವೃತ್ತದ ಮೂಲಕ ಡಿ.ದೇವರಾಜ ಅರಸು ರಸ್ತೆ ಮಾರ್ಗವಾಗಿ ಜೆಎಲ್ ಬಿ ರಸ್ತೆಯಲ್ಲಿರುವ ಇಂಜಿನಿಯರುಗಳ ಸಂಸ್ಥೆಯಲ್ಲಿ ಸಮಾಪ್ತಿಗೊಂಡಿತು. ಕೋಟೆ ಆಂಜನೇಯ ದೇವಸ್ಥಾನದ ಬಳಿ ಬೀದಿ ನಾಟಕವನ್ನೂ ಪ್ರದರ್ಶಿಸಲಾಯಿತು. 100ಕ್ಕೂ ಹೆಚ್ಚು ಗೃಹ ಕಾರ್ಮಿಕ ಮಹಿಳೆಯರು ಪಾಲ್ಗೊಂಡಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: