ಕರ್ನಾಟಕ

ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರಕಾರ ಉಳಿಯೋದಿಲ್ಲ ಎಂದರಾ ಕಾಂಗ್ರೆಸ್ ಶಾಸಕರು?

ಧರ್ಮಸ್ಥಳ (ಜೂನ್ 27): ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಈ ಸರಕಾರ ಉಳಿಯೋದಿಲ್ಲ ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣ್ ರಾವ್ ಹೇಳಿದ್ದಾರೆ.

ಇಂದು ಧರ್ಮಸ್ಥಳದ ಉಜಿರೆಯಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ತೆರಳಿದ್ದರು. ಸಿದ್ದರಾಮಯ್ಯ ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ನಾಯಕ, ಅವರನ್ನು ಭೇಟಿಯಾಗಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇವೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ ಒಂದು ವೇಳೆ ಅವರಿಗೆ ಬೇಜಾರು ಆದ್ರೆ ಈ ಸರ್ಕಾರ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಶಾಸಕ ಬಿ.ನಾರಾಯಣ್ ಅವರ ಮಾತನ್ನ ಗಮನಿದರೆ ಸಿದ್ದರಾಮಯ್ಯ ಅವರು ಶಾಂತಿವನದಲ್ಲಿ ರಾಜ್ಯ ಸರ್ಕಾರದ ಉಳಿವು-ಅಳಿವಿನ ಕುರಿತು ಚರ್ಚೆ  ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: