
ಮೈಸೂರು
ಹಾವು ಕಚ್ಚಿ ರೈತ ಮಹಿಳೆ ಸಾವು
ಮೈಸೂರು, ಜೂ.27:- ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವಿಗೀಡಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಭೂತನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಕುಮಾರ್ ಎಂಬವರ ಪತ್ನಿ ಲಲಿತಮ್ಮ(35) ಎಂದು ಹೇಳಲಾಗಿದ್ದು ,ಬೆಳಿಗ್ಗೆ 10ಗಂಟೆ ಸಮಯದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿ ಬಿಡಿಸುತ್ತಿದಾಗ ವಿಷಪೂರಿತ ಹಾವು ಕಚ್ಚಿದ್ದು ಕೂಡಲೇ ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತಂತೆ ಮೃತಳ ಪತಿ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)