ಮೈಸೂರು

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಮೈಸೂರು,ಜೂ.28:- ಮೈಸೂರು ನಗರದಲ್ಲಿ ದಿ.29/06/2018 ರಿಂದ ದಿ 10/07/2018 ರ ವರೆಗೆ ಪಿ.ಯು.ಸಿ ಪೂರಕ ಪರೀಕ್ಷೆಗಳು ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಸಂಭವ ಹೆಚ್ಚಾಗಿ ಕಂಡುಬಂದಿದ್ದು, ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಕ್ತವಾಗಿ ಶಾಂತ ವಾತಾವರಣದಲ್ಲಿ ನಡೆಸಲು ಹಾಗೂ ಕಾನೂನು-ಸುವ್ಯವಸ್ಥೆ ದೃಷ್ಟಿಯಿಂದ ನಗರದಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಲಂ 144 ದಂಡ ಪ್ರಕ್ರಿಯಾ ಸಂಹಿತೆಯ ರೀತ್ಯ ನಿಷೇಧಾಜ್ಞೆಯನ್ನು ಜಾರಿಮಾಡಬೇಕೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚುವಂತೆ ಆದೇಶಿಸಬೇಕೆಂದು ಕಾನೂನು -ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತವಾತಾವರಣದಲ್ಲಿ ನಡೆಸಲು ಕಲಂ 144 ಸಿ.ಆರ್.ಪಿ.ಸಿ. ರೀತ್ಯಾ ಮೈಸೂರು ನಗರದ ಒಟ್ಟು 7 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಾಜ್ಞೆ ಅವಶ್ಯವೆಂದು ಮನಗಂಡು ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ನಗರ ಪೊಲೀಸ್ ಆಯುಕ್ತ ಡಾ. ಎ.ಸುಬ್ರಮಣ್ಯೇಶ್ವರ ರಾವ್  ಅವರು ದಿ. 29/06/2018 ರಿಂದ ದಿ. 10/07/2018 ರವೆಗೆ ಪಿ.ಯು.ಸಿ ಪೂರಕ ಪರೀಕ್ಷೆಗಳು ನಡೆಯುವ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಒಟ್ಟು 07 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಲಂ 144 ಸಿ.ಆರ್.ಪಿ.ಸಿ. ರೀತ್ಯಾ ನಿಷೇಧಾಜ್ಞೆಯನ್ನು ಘೋಷಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಲು ಆದೇಶಿಸಿದ್ದು, ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದಾಗಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: