ದೇಶ

ಸಚಿವೆ ಸುಷ್ಮಾ ವಾರ್ಡ್‍ಗೆ ಸ್ಥಳಾಂತರ

ನವದೆಹಲಿ: ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಐಸಿಯು ವಾರ್ಡ್‍ನಿಂದ ಸ್ಥಳಾಂತರಿಸಲಾಗಿದೆ ಎಂದು ಚಿಕಿತ್ಸೆ ನೀಡಿದ ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಡಿ.10ರಂದು ಶಸ್ತ್ರಚಿಕಿತ್ಸೆ ಪಡೆದಿದ್ದ ಸಚಿವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಗುಣಮುಖರಾಗುತ್ತಿದ್ದಾರೆ. ಕೆಲ ತಿಂಗಳಿನಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಸಚಿವೆ ಸುಷ್ಮಾ ಸ್ವರಾಜ್ ನ.7ರಂದು ಏಮ್ಸ್‍ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಯಾದ ಡಯಾಲಿಸಿಸ್ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಿತ್ತು. ನ.16ರಂದು ಕಿಡ್ನಿ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

Leave a Reply

comments

Related Articles

error: