ಮೈಸೂರು

ಮಾಲಿನ್ಯ ತಪಾಸಣೆ ಸಂಚಾರಿ ವಾಹನಕ್ಕೆ ಚಾಲನೆ

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಮೈಸೂರು ಮಹಾನಗರಪಾಲಿಕೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡುವ ನೂತನ ಸಂಚಾರಿ ವಾಹನಕ್ಕೆ ಬುಧವಾರ ಮಹಾನಗರಪಾಲಿಕೆ ಮೇಯರ್ ಎಂ.ಜೆ. ರವಿಕುಮಾರ್, ಜಿಲ್ಲಾಧಿಕಾರಿ ಡಿ. ರಂದೀಪ್ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಸರ್ಕಾರಿ ವಾಹನದ ಮಾಲಿನ್ಯ ತಪಾಸಣೆ ನಡೆಸುವ ಮೂಲಕ ನೂತನವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಮಾತನಾಡಿ ದೆಹಲಿಯಲ್ಲಿ ಈಗಾಗಲೇ ವಾಯುಮಾಲಿನ್ಯ ಹೆಚ್ಚಾಗಿದೆ. ಅದರಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ರಾಜ್ಯಾದ್ಯಂತ ಈ ಯೋಜನೆಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ 8, ಮೈಸೂರಲ್ಲಿ 1, ಮಂಗಳೂರಿನಲ್ಲಿ 1, ಹುಬ್ಬಳ್ಳಿ-ಧಾರವಾಡಗಳಲ್ಲಿ 1, ಗುಲ್ಬರ್ಗಾದಲ್ಲಿ 1 ವಾಹನಗಳಿವೆ ಎಂದರು.

ಮಾಲಿನ್ಯವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಮೊಹಮ್ಮದ್ ನಜಿರುಲ್ಲಾ, ಮುನ್ಸಿಪಲ್ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: