ಕರ್ನಾಟಕ

ಕಂದಾಯ ಸಚಿವರ ಉತ್ತರ ಕನ್ನಡ ಜಿಲ್ಲಾ ಪ್ರವಾಸ

ಬೆಂಗಳೂರು (ಜೂನ್ 30): ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಜೂನ್ 30, ಶನಿವಾರ ಮತ್ತು ಜುಲೈ 1 ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಲಿದ್ದಾರೆ.

ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರವಾರವನ್ನು ತಲುಪಲಿರುವ ಅವರು ಮೊದಲಿಗೆ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಬಳಿಕ 11 ಗಂಟೆಗೆ, ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಮತ್ತು ಅದಕ್ಕೆ ಕೈಗೊಂಡಿರುವ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳನ್ನು ಕುರಿತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ನಂತರ, ಜೋಯಿಡಾಕ್ಕೆ ತೆರಳಲಿರುವ ಸಚಿವರು ಅಲ್ಲಿ ಸಂಜೆ 4.30ಕ್ಕೆ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಜುಲೈ 1, ಭಾನುವಾರದಂದು ಸಚಿವ ದೇಶಪಾಂಡೆಯವರು ಹಳಿಯಾಳದ ಪುರಸಭೆ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜೊತೆಗೆ, ಮುಜರಾಯಿ ಇಲಾಖೆಯಿಂದ ಮಂಜೂರಾಗಿರುವ ದೇವಸ್ಥಾನಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. (ಎನ್.ಬಿ)

Leave a Reply

comments

Related Articles

error: