ಪ್ರಮುಖ ಸುದ್ದಿಮೈಸೂರು

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿಗಿಲ್ಲ ಸ್ಥಾನ – ಪ್ರತಿಭಟನೆ

ಮೈಸೂರು ಮಹಾನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದಿದ್ದು, ಬಿಜೆಪಿ ಸದಸ್ಯರಿಗೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಯಾರಿಗೂ ಅವಕಾಶ ನೀಡಿಲ್ಲದ ಕಾರಣ ಬಿಜೆಪಿ ಸದಸ್ಯರು ಮೇಯರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಜೆಡಿಎಸ್ ನ ಮಹಾದೇವಪ್ಪ, ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆ.ವಿ. ಮಲ್ಲೇಶ್ ಹಾಗೂ ನಗರ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆಂಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಕೆಂಪಣ್ಣ ಅವರ ಬದಲು ಆ ಜಾಗಕ್ಕೆ ಬಿಜೆಪಿಯ ನಂದೀಶ್ ಪ್ರೀತಂ ಅವರು ನಾಮಪತ್ರ ಸಲ್ಲಿಸಿದ್ದರು ಎನ್ನಲಾಗಿತ್ತು. ಅಷ್ಟೇ ಅಲ್ಲ ನಂದೀಶ್ ಪ್ರೀತಂ ಹೆಸರು ಕೇಳಿಬಂದಿತ್ತು. ಆದರೆ ಏಕಾಏಕಿ ಕೆಂಪಣ್ಣ ಅವರನ್ನು ನೇಮಕ ಮಾಡಿರುವುದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ. ನಮಗೆ ಸ್ಥಾಯಿ ಸಮಿತಿಯಲ್ಲಿ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಾಲ್ಕನೇ ಸ್ಥಾನಕ್ಕೆ ಚುನಾವಣೆ ನಡೆಸುವುದೆಂದು ತೀರ್ಮಾನಿಸಲಾಯಿತು. ಆದರೆ ಮೇಯರ್ ಎಂ.ಜೆ. ರವಿಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಸ್ಥಳದಿಂದ ನಿರ್ಗಮಿಸಿದ್ದರಿಂದ ಕಾರ್ಯಕರ್ತರು ಕೆರಳಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಹೆಚ್.ವಿ. ರಾಜೀವ್ ಆಗಮಿಸಿದ್ದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು. ಇದೀಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಮುಂದುವರಿಸಿದ್ದು, ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

Leave a Reply

comments

Related Articles

error: