ಮೈಸೂರು

ಗುಡ್ಡಗಾಡು ಪ್ರದೇಶಗಳಲ್ಲಿರುವ ಶಿಕ್ಷಕರು ಮತ್ತು ಶಿಕ್ಷಕ ತರಬೇತುದಾರರು ಎದುರಿಸುತ್ತಿರುವ ಸಮಸ್ಯೆಗಳು : ರಾಷ್ಟ್ರೀಯ ಸಮ್ಮೇಳನ

ಮೈಸೂರು,ಜು.2:- ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಎನ್ ಸಿಇಆರ್ ಟಿ, ಅಂತರ ವಿಶ್ವವಿದ್ಯಾನಿಲಯ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಗ್ರಾಮೀಣ , ನಿರ್ಲಕ್ಷ್ಯಿತ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿರುವ ಶಿಕ್ಷಕರು ಮತ್ತು ಶಿಕ್ಷಕ ತರಬೇತುದಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ತಾಂತ್ರಿಕ ಬ್ಲಾಕ್ ನಲ್ಲಿನ ಎ.ವಿ.ಸಭಾಂಗಣದಲ್ಲಿಂದು ಆಯೋಜಿಸಲಾಗಿತ್ತು.

ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಸಮ್ಮೇಳನಕ್ಕೆ  ಕೇಂದ್ರ ಸರ್ಕಾರದ ಕಲ್ಯಾಣ ಇಲಾಖೆಯ ಮಾಜಿ ಕಾರ್ಯದರ್ಶಿ ಪಿ.ಎಸ್.ಕೃಷ್ಣನ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಸ್ವಾಮಿ ವಿವೇಕಾನಂದ ಯೂತ ಮೂವ್ ಮೆಂಟ್ ಸಂಸ್ಥೆ ಸಂಸ್ಥಾಪಕ ಡಾ.ಎಂ.ಎ.ಬಾಲಸುಬ್ರಹ್ಮಣ್ಯ,ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರೊ.ವೈ.ಶ್ರೀಕಾಂತ್, ಪ್ರೊ.ಮಲ್ಲಿ ಗಾಂಧಿ, ಪ್ರೊ.ಜಿ.ವಿ.ಗೋಪಾಲ್ ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ  ಶಿಕ್ಷಕರ ಕಾರ್ಯ ಮತ್ತು ಕಾಳಜಿಗಳ ಬಗ್ಗೆ  ಚರ್ಚೆ,ಸಂಸ್ಥೆಗಳ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಅರಿವು, ಗ್ರಾಮೀಣ ಹಿಂದುಳಿದ ಮತ್ತು ಗುಡ್ಡಗಾಡು ಪ್ರದೇಶದಲ್ಲಿರುವ  ಶಿಕ್ಷಕರೊಂದಿಗೆ ಚರ್ಚಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ 100 ಕ್ಕೂ ಹೆಚ್ಚು ಮಂದಿ ಶಿಕ್ಷಕರು ಭಾಗಿಯಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: