
ಪ್ರಮುಖ ಸುದ್ದಿ
ಪಿಂಕ್ ಹೊಯ್ಸಳ ರಸ್ತೆ ವಿಭಜಕಕ್ಕೆ ಡಿಕ್ಕಿ : ಇಬ್ಬರಿಗೆ ಗಾಯ
ರಾಜ್ಯ(ಬೆಂಗಳೂರು)ಜು.2:- ವೇಗವಾಗಿ ಹೋಗುತ್ತಿದ್ದ ಪಿಂಕ್ ಹೊಯ್ಸಳ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನ್ಯೂಬಿಇಎಲ್ ರಸ್ತೆಯಲ್ಲಿ ನಡೆದಿದೆ.
ಗಾಯಗೊಂಡಿರುವ ಸದಾಶಿವನಗರ ಪೊಲೀಸ್ ಠಾಣೆಯ ಪೇದೆಗಳಾದ ನಾಗರತ್ನ ಹಾಗೂ ಉಮೇಶ್ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಗರತ್ನ ಅವರು ಉಮೇಶ್ ಅವರು ಚಾಲಕರಾಗಿದ್ದ ಪಿಂಕ್ ಹೊಯ್ಸಳದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದಾಗ ನ್ಯೂಬಿಇಎಲ್ ರಸ್ತೆಯ ಬಳಿ ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ಸದಾಶಿವನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)