
ಮೈಸೂರು
ಹಫ್ತಾ ಕೊಡಲಿಲ್ಲವೆಂಬ ಕಾರಣಕ್ಕೆ ಹಲ್ಲೆ : ವ್ಯಕ್ತಿಯ ಬಂಧನ
ಮೈಸೂರು,ಜು.3:- ಟೀ ಅಂಗಡಿಯ ಮಾಲೀಕನೋರ್ವನ ಮೇಲೆ ಹಫ್ತಾ ಕೊಡಲಿಲ್ಲವೆಂಬ ಕಾರಣಕ್ಕೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಉದಯಗಿರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೈಸೂರು ಕಲ್ಯಾಣಗಿರಿ ನಿವಾಸಿ ಮೊಹಮ್ಮದ್ ಅಜರ್ ಎಂದು ಗುರುತಿಸಲಾಗಿದ್ದು,ಈತ ರಾಜ್ ಕುಮಾರ್ ರಸ್ತೆಯಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಟೀ ಅಂಗಡಿ ಮಾಲೀಕ ಉತ್ತಮ್ ಸಿಂಗ್ ಎಂಬವರ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ. ಮತ್ತೆ ಜೂ.29ರಂದು ಅಂಗಡಿಗೆ ಬಂದು ಖರ್ಚಿಗೆ ಹಣ ನೀಡುವಂತೆ ಕೇಳಿದ್ದು, ಮಾಲೀಕ ಹಣ ಯಾಕೆ ನೀಡಬೇಕೆಂದು ಪ್ರಶ್ನಿಸಿದ್ದಕ್ಕೆ ಮಾಲೀಕನಿಗೆ ಜೀವ ಬೆದರಿಕೆಯೊಡ್ಡಿ ಮತ್ತೆ ಹಲ್ಲೆ ನಡೆಸಿದ್ದ. ಈ ಕುರಿತು ಉತ್ತಮ್ ಸಿಂಗ್ ಉದಯಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಮೊಹಮ್ಮದ್ ಅಜರ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (ಕೆ.ಎಸ್,ಎಸ್.ಎಚ್)