ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಔತಣ ಕೂಟ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು (ಜುಲೈ 3): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರಿಗೆ ಇಂದು ಬೆಂಗಳೂರಿನ ಖಾಸಗಿ ಹೋಟೆಲ್’ನಲ್ಲಿ ಔತಣಕೂಟ ಏರ್ಪಡಿಸಿದ್ದಾರೆ. ಆದರೆ ಈ ಔತಣಕೂಟವನ್ನು ರಾಜಕೀಯ ದೃಷ್ಟಿಕೋನದಿಂದ ನೋಡುವ ಜನರು ಸಿದ್ದರಾಮಯ್ಯನವರು ಶಕ್ತಿ ಪ್ರದರ್ಶನಕ್ಕೆ ವೇದಿಕೆ ಅಣಿಮಾಡಿಕೊಳ್ಳುತ್ತಿದ್ದಾರಾ ಎಂಬ ಕುತೂಹಲದ ಕಣ್ಣುಗಳಿಂದ ನೋಡಲಾರಂಭಿಸಿದ್ದಾರೆ.

ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಸಿದ್ದರಾಮಯ್ಯನವರು, ಅಲ್ಲಿದ್ದ ವೇಳೆ ಶಾಸಕರ ಸಭೆ ನಡೆಸುವ ಮೂಲಕ ಹಾಗೂ ಸರ್ಕಾರದ ಆಯುಷ್ಯ ಕುರಿತು ಆಪ್ತರ ಮುಂದೆ ಮಾತನಾಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಆತಂಕ ತಂದೊಡ್ಡಿದ್ದರು. ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಸಿದ್ದರಾಮಯ್ಯನವರು ಬೆಂಗಳೂರಿಗೆ ಬಂದ ನಂತರ ಅವರೊಂದಿಗೆ ಮಾತುಕತೆ ನಡೆಸಿದ್ದ ಕಾಂಗ್ರೆಸ್ ನಾಯಕರು, ಸಮ್ಮಿಶ್ರ ಸರ್ಕಾರದ ವಿರುದ್ಧದ ಅವರ ಅಸಮಾಧಾನವನ್ನು ಶಮನಗೊಳಿಸಿದ್ದರು.

ಇದೀಗ ಕಾಂಗ್ರೆಸ್ ಶಾಸಕರುಗಳಿಗೆ ಸಿದ್ದರಾಮಯ್ಯನವರು ಔತಣಕೂಟ ಏರ್ಪಡಿಸಿದ್ದು, ಬಜೆಟ್ ಸಂದರ್ಭದಲ್ಲಿ ಶಾಸಕರು ಯಾವ ರೀತಿ ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕೆಂಬ ಕುರಿತು ಸೂಚನೆ ನೀಡುವ ಸಾಧ್ಯತೆಗಳಿವೆ. (ಎನ್.ಬಿ)

Leave a Reply

comments

Related Articles

error: