ಮೈಸೂರು

ಮತದಾರರ ಪಟ್ಟಿಯನ್ನು ಆನ್ ಲೈನ್ ನಲ್ಲಿ ಪ್ರಕಟಿಸುವಂತೆ ಮನವಿ

ಮೈಸೂರು,ಜು.4:- ನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿಯನ್ನು ಆನ್ ಲೈನ್ ನಲ್ಲಿ ಪ್ರಕಟಿಸುವಂತೆ ನವಭಾರತ ನಿರ್ಮಾಣ ಸೇವಾ ಟ್ರಸ್ಟ್ ಮನವಿ ಮಾಡಿದೆ.

ಪಾಲಿಕೆ ಸದಸ್ಯ ಕೆ.ವಿ. ಮಲ್ಲೇಶ್,  ಟ್ರಸ್ಟ್  ಅಧ್ಯಕ್ಷ ಕೆ.ವಿ.ಶ್ರೀಧರ್ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲೇ ರಾಜ್ಯ ಚುನಾವಣಾ ಆಯೋಗ ಮತದಾರ ಪಟ್ಟಿಯನ್ನು ಸುಲಭವಾಗಿ ಮತದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು. ಮತದಾರ ಪಟ್ಟಿಯನ್ನು ಆನ್ ಲೈನ್ ಮೂಲಕ, ಮೊಬೈಲ್ ಮೂಲಕ ತಲುಪುವಂತೆ ಮಾಡಬೇಕೆಂದು ಮನವಿ ಸಲ್ಲಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: