ಮೈಸೂರು

45 ಕೋ.ರೂ. ವೆಚ್ಚದಲ್ಲಿ ನಂಜನಗೂಡು ತಾಲೂಕಿನ 28 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಸ್ಥಳಕ್ಕೆ ಧ್ರುವನಾರಾಯಣ ಭೇಟಿ

ಮೈಸೂರು,ಜು.5:- ಸುಮಾರು 45 ಕೋಟಿ ರೂಪಾಯಿ ವೆಚ್ಚದಲ್ಲಿ ನಂಜನಗೂಡು ತಾಲೂಕಿನ 28 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ನಡೆಯುವ ಸ್ಥಳಕ್ಕೆ ಸಂಸದ ಧ್ರುವನಾರಾಯಣ್ ಭೇಟಿ ನೀಡಿ ನೀಡಿ  ಪರಿಶೀಲನೆ ನಡೆಸಿದರು.

ತಾಲೂಕಿನ ಕಣೇನೂರು ಗ್ರಾಮದ ಬಳಿ ಕಬಿನಿ ನದಿಯಿಂದ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಯೋಜನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಸಂಸದ ಧ್ರುವನಾರಾಯಣ ನಿನ್ನೆ ತಮ್ಮ ಪಕ್ಷದ ಮುಖಂಡರೊಂದಿಗೆ ಕಣೇನೂರು ಬಳಿ ನಿರ್ಮಾಣವಾಗುತ್ತಿರುವ ಪಂಪ್ ಹೌಸ್ ಮತ್ತು ಮಾದಾಪುರ ಬಳಿ ನಡೆಯುತ್ತಿರುವ ಪೈಪ್ ಗಳ ನಿರ್ಮಾಣ ಕಾಮಗಾರಿಗಳ ಬಳಿ ತೆರಳಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು ಹುರ ಮತ್ತು ಇತರೆ 28 ಕೆರೆಗಳಿಗೆ ಸುಮಾರು 45 ಕೋಟಿ ರೂಪಾಯಿ ವೆಚ್ಚದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಚಾಲನೆ ನೀಡಲಾಗಿತ್ತು. ಯೋಜನೆಯಿಂದ ಹಲವಾರು ಗ್ರಾಮಗಳ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಾಗುವುದರಿಂದ ಆ ಭಾಗದ ಕುಡಿಯುವ ನೀರು ಮತ್ತು ವ್ಯವಸಾಯಕ್ಕೆ ಅನುಕೂಲವಾಗಲಿದೆ ಎಂದರು.

ಕಾರ್ಯಪಾಲಕ ಅಭಿಯಂತರರುಗಳಾದ ಮರಿಸ್ವಾಮಿ, ರಾಜೇಂದ್ರ ಪ್ರಸಾದ್, ಮುಖಂಡರುಗಳಾದ ನಾಗೇಶ ರಾಜ್ ಕುರಟ್ಟಿ, ಮಹೇಶ, ಮಾದಪ್ಪ, ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: