ಮೈಸೂರು

ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು : ಕುಂದುಕೊರತೆ ಸಭೆಯಲ್ಲಿ ಅಧಿಕಾರಿಗಳ ಭರವಸೆ

ಮೈಸೂರು ನಗರ ಸಾರಿಗೆ ವಿಭಾಗದ ಕುವೆಂಪುನಗರ ಬಸ್ ಡಿಪೋನಲ್ಲಿ ಬುಧವಾರ  ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ನಗರ ಸಾರಿಗೆ ಬಸ್ ಸಂಚಾರಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಬಸ್ ನಿರ್ವಾಹಕರು ಹಿರಿಯ ನಾಗರಿಕರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ನೋಟು ನಿಷೇಧದಿಂದ ಚಿಲ್ಲರೆ ಸಮಸ್ಯೆ ಹೆಚ್ಚಾಗುತ್ತಿದ್ದು, ತೊಂದರೆಯಾಗುತ್ತಿದೆ ಎಂಬ ಮಾತುಗಳು ಕೇಳಿ ಬಂತು.

ಪ್ರತಿಬಸ್ ನಿಲ್ದಾಣಗಳಲ್ಲಿ ವೇಳಾಪಟ್ಟಿಯಿರುವ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ ಆದರೆ, ಕೆಲವು ಕಡೆಗಳಲ್ಲಿ ಅಳವಡಿಸಲಾಗಿಲ್ಲ ದಟ್ಟಗಳ್ಳಿ ಕಡೆ ಹೋಗುವಲ್ಲಿ ಬಸ್ ನಿಲ್ದಾಣಗಳೇ ಇಲ್ಲ.ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ರಾಮಕೃಷ್ಣನಗರದಿಂದ ರೈಲ್ವೆ ನಿಲ್ದಾಣಕ್ಕೆ ನೇರ ಬಸ್ ಸಂಪರ್ಕ ಕಲ್ಪಿಸಿಕೊಡಿ ಎಂದು ಗ್ರಾಹಕ ಪರಿಷತ್ ಸದಸ್ಯ ನಿವೃತ್ತ ಪ್ರೊ.ಶಂಕರ್ ಹೇಳಿದರು.

ವಿಭಾಗೀಯ ನಿಯಂತ್ರಣಾಧಿಕಾರಿ ರಾಮಮೂರ್ತಿ ಮಾತನಾಡಿ, ಎಲ್ಲೆಲ್ಲಿ ಸಮಸ್ಯೆ ಕಂಡು ಬರುತ್ತದೆಯೋ ಅಲ್ಲಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.  ಹಣ ನೀಡಿದರೂ ಟಿಕೇಟ್ ಕೊಡದೇ ಹೋದರೆ ಅಥವಾ ವಾಹನಗಳು ಹೊಗೆ ಉಗುಳುತ್ತಿದ್ದರೆ  ಅಥವಾ  ಬಸ್ ಸಂಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ದೂರವಾಣಿ ಸಂಖ್ಯೆ: 7760990751ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.

ಕುಂದುಕೊರತೆ ಸಭೆಯಲ್ಲಿ ವಿಭಾಗೀಯ ಸಂಚಾರ ಅಧಿಕಾರಿ ಸುಧೀರ್, ಸಹಾಯಕ ಸಂಚಾರ ವ್ಯವಸ್ಥಾಪಕ ದಿನೇಶ್ ಹಾಗೂ ಡಿಪೋ ವ್ಯವಸ್ಥಾಪಕ ಶ್ರೀನಿವಾಸ್ ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

comments

Related Articles

error: