ಕರ್ನಾಟಕ

ಕಾನೂನು ತರಬೇತಿ: ಅರ್ಜಿ ಆಹ್ವಾನ

ಮಂಡ್ಯ (ಜುಲೈ 5): ಮಂಡ್ಯ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ 2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾನೂನು ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಾನೂನು ತರಬೇತಿ ಪಡೆಯುವ ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಗಳಲ್ಲಿ ಯಾವುದಾದರೊಂದು ಸಮುದಾಯಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.3.50 ಲಕ್ಷ ಮೀರರಿಬಾರದು. ಅಭ್ಯರ್ಥಿಯು ತಮ್ಮ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು.

ಅರ್ಜಿ ಸಲ್ಲಿಸಲು ನಿಧಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು ಮತ್ತು ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು ವಕೀಲರಾಗಿ ಕಾರ್ಯನಿರ್ವಹಿಸಲು ನಿಗದಿಪಡಿಸಲಾದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2ವರ್ಷ ಅವಧಿಯ ಒಳಗಿರುವವರು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತರಬೇತಿ ಅವಧಿಯ ಮಧ್ಯ ಭಾಗದಲ್ಲಿ ತರಬೇತಿಗೆ ಗೈರುಹಾಜರಾದಲ್ಲಿ ಪಡೆಯಲಾಗಿರುವ ಶಿಷ್ಯವೇತನದ ಹಣವನ್ನು ಬಡ್ಡಿಯೊಂದಿಗೆ ಹಿಂದಿರುಗಿಸಬೇಕಾಗುವುದು.

ಅರ್ಜಿಯನ್ನು ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿ ನಮೂನೆಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.14, 1ನೇ ಕ್ರಾಸ್, ವಿವೇಕಾನಂದ ನಗರ, ಕೆರೆಅಂಗಳ, ನಾಗಮಂಗಲ ರಸ್ತೆ, ಮಂಡ್ಯ ಇಲ್ಲಿ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.(ಎನ್.ಬಿ)

Leave a Reply

comments

Related Articles

error: