ಕರ್ನಾಟಕಮೈಸೂರು

ಮದುವೆಗೆ ಪೋಷಕರು ನಿರಾಕರಿಸಿದ ಹಿನ್ನೆಲೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಯುವಕ ಸಾವು

ರಾಜ್ಯ(ಮಂಡ್ಯ)ಜು.6:- ಪ್ರೇಮಿಗಳ ಮದುವೆಗೆ ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದು, ಪ್ರಿಯಕರ ಸಾವನ್ನಪ್ಪಿ ಯುವತಿ ಆಸ್ಪತ್ರೆ ಸೇರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಾಯರಳ್ಳಿಯ ಆಂಜನೇಯ ದೇವಸ್ಥಾನದ ಬಳಿ ನಡೆದಿದೆ.

ಮೃತನನ್ನು ಎಚ್.ಡಿ.ಕೋಟೆ ತಾಲೂಕು ಯಡಿಯಾಳ ಗ್ರಾಮದ ಪ್ರಿಯಕರ ಶಿವು(19)ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ಯುವತಿ ಅನ್ನಪೂರ್ಣ (18) ವಿಷ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ಪರಸ್ಪರ ಪ್ರೀತಿಸಿದ್ದು, ವಿವಾಹಕ್ಕೆ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಇವರಿಬ್ಬರೂ ಆತ್ಮಹತ್ಯೆಗೆ ಮುಂದಾಗಿದ್ದು,ವಿಷ ಸೇವಿಸಿದ್ದರು. ವಿಷ ಸೇವಿಸಿದ ಕೂಡಲೇ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದು,ಯುವತಿ ಒದ್ದಾಡುತ್ತಿದ್ದಳು. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಎನ್ನಲಾಗಿದೆ. ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)‌

Leave a Reply

comments

Related Articles

error: