ಪ್ರಮುಖ ಸುದ್ದಿ

ಬಜೆಟ್ ನಲ್ಲಿ ಕರಾವಳಿ ಭಾಗ ಕಡೆಗಣನೆ : ವಿಧಾನಸೌಧದ ಎದುರು ಕರಾವಳಿ ಬಿಜೆಪಿ ಶಾಸಕರ ಪ್ರತಿಭಟನೆ

ರಾಜ್ಯ(ಬೆಂಗಳೂರು)ಜು.6:-  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ನಿನ್ನೆ ಮಂಡಿಸಿದ ಮೈತ್ರಿ ಸರ್ಕಾರದ ಬಜೆಟ್ ನಲ್ಲಿ ಕರಾವಳಿ ಭಾಗವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ  ಕರಾವಳಿ ಭಾಗದ ಬಿಜೆಪಿ ಶಾಸಕರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ಬಜೆಟ್ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಧರಣಿಯಲ್ಲಿ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜಾ,ರಘುಪತಿ ಭಟ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಉಪಸ್ಥಿತರಿದ್ದರು.ಸಿಎಂ‌ ಕುಮಾರಸ್ವಾಮಿಯವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಈ ಕೂಡಲೇ ಕರಾವಳಿ ಭಾಗಕ್ಕೆ ಅನುದಾನ ಘೋಷಿಸಲಿ. ಉತ್ತರ ಕನ್ನಡ,ಉಡುಪಿ, ದಕ್ಷಿಣ ಕನ್ನಡ ಮೂರು ಜಿಲ್ಲೆಗಳಿಗೆ ಯಾವುದೇ ಅನುದಾನ ನೀಡಿಲ್ಲ. ಅನುದಾನ ಘೋಷಿಸದಿದ್ದರೇ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಮೇಲ್ಮನೆ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: