
ಸುದ್ದಿ ಸಂಕ್ಷಿಪ್ತ
ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಮೈಸೂರು, ಜು,6:- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಪ್ಪಾರ ಮತ್ತು ಅಂಬಿಗ ಅದರ ಉಪಜಾತಿಯವರು ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳ ಜನರು (ವಿಶ್ವಕರ್ಮ ಅದರ ಉಪ ಜಾತಿಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಆರ್ಥಿಕ ಅಭಿವೃದ್ಧಿಗಾಗಿ 2018-19ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 18 ರೊಳಗಾಗಿ ಸಲ್ಲಿಸಬೇಕು. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು . (ವಿಶ್ವಕರ್ಮ ಅದರ ಉಪ ಜಾತಿ ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) (2)ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000ರೂ.ಗಳು ಪಟ್ಟಣ ಪ್ರದೇಶದವರಿಗೆ 55,000ರೂ.ಗಳ ಒಳಗಿರಬೇಕು. (3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. (4)ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ಚುನವಣಾ ಗುರುತಿನ ಚೀಟಿ/ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. (ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾತೆ ಹೊಂದಿರಬೇಕು.
ಮೈಸೂರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಅಥವಾ ನಿಗಮದ ವೆಬ್ ಸೈಟ್ www.karnataka.gov.in/dbcdc ಇಲ್ಲಿ ಪಡೆದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ದಿನಾಂಕ: 18/08/2018 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.karnataka.gov.in/dbcdc ಹಾಗೂ ಮೈಸೂರು ಜಿಲ್ಲಾ ಕಛೇರಿಯಾ ದೂರವಾಣಿ ಸಂಖ್ಯೆ:- 0821-2341194 ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)