ಕರ್ನಾಟಕ

ಜುಲೈ 7 – 8 ರಂದು ಸಣ್ಣ ನೀರಾವರಿ ಸಚಿವರ ಪ್ರವಾಸ

ಮಂಡ್ಯ (ಜುಲೈ 6): ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ಜುಲೈ 7 ಮತ್ತು ಜುಲೈ 8ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜುಲೈ 7 ರಂದು ಬೆಳಿಗ್ಗೆ 9 ಗಂಟೆಗೆ ಕ್ಷೇತ್ರ ಪ್ರವಾಸ, ಸಾರ್ವಜನಿಕ ಭೇಟಿ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಪಾಂಡವಪುರ ತಾಲ್ಲೂಕಿನ ಚಿನಕುರಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜುಲೈ 8 ರಂದು ಬೆಳಿಗ್ಗೆ 9 ಗಂಟೆಗೆ ಕ್ಷೇತ್ರ ಪ್ರವಾಸ, ಸಾರ್ವಜನಿಕರ ಭೇಟಿ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಪಾಂಡವಪುರದಿಂದ ಬೆಂಗಳೂರಿಗೆ ನಿರ್ಗಮಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: