
ಮೈಸೂರು
ಕೆಎಸ್ಒಯು ಕುಲಸಚಿವ ಪ್ರೊ.ಪಿ.ಎಸ್. ನಾಯಕ್ ಅಮಾನತು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕೆಎಸ್ಒಯು) ಕುಲಸಚಿವ ಪ್ರೊ.ಪಿ.ಎಸ್. ನಾಯಕ್ ಅವರನ್ನು ಬುಧವಾರ ಅಮಾನತುಗೊಳಿಸಲಾಗಿದೆ.
ಕೆಎಸ್ಒಯುನಲ್ಲಿನ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಶಿಫಾರಸಿನ ಮೇರೆಗೆ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ. ಪ್ರೊ.ನಾಯಕ್ ಅವರನ್ನು ಬುಧವಾರ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಪ್ರೊ.ಸೋಮಶೇಖರ್ ಅವರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಸಮಿತಿಯು ಕೆಎಸ್ಒಯು ಅಕ್ರಮಗಳ ವಿಚಾರಣೆ ನಡೆಸಿ ರಾಜ್ಯಪಾಲರಿಗೆ ವರದಿ ಸಲ್ಲಿಸಿತ್ತು. ಪಾರದರ್ಶಕತೆ ನಿಯಮ ಉಲ್ಲಂಘನೆ, ಕಂಪ್ಯೂಟರ್ ಖರೀದಿ, ಅಂಕಪಟ್ಟಿ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಎಸ್ಒಯು ಕುಲಸಚಿವ ಪ್ರೊ.ಪಿ.ಎಸ್. ನಾಯಕ್ ಸೇರಿದಂತೆ 7 ಮಂದಿ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.