
ಕಾರ್ಡಿಫ್,ಜು.7-37ನೇ ವಸಂತಕ್ಕೆ ಕಾಲಿರಿಸಿದ ಭಾರತದ ಮಾಜಿ ನಾಯಕ ಎಂ.ಎಸ್.ಧೋನಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪತ್ನಿ ಸಾಕ್ಷಿ ಸಿಂಗ್ ಧೋನಿ, ಮಗಳು ಝಿವಾ ಹಾಗೂ ಸಹ ಆಟಗಾರರ ಸಮ್ಮುಖದಲ್ಲಿ ಧೋನಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧೋನಿ ಹುಟ್ಟುಹಬ್ಬ ಆಚರಣೆಯ ಫೋಟೋಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟಿ-20 ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು. ಪಂದ್ಯದಲ್ಲಿ ಭಾರತ ಸೋತರೂ ಧೋನಿ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಮೂಲಕ ಸೋಲಿನ ಕಹಿಯನ್ನು ಮರೆತಿದ್ದಾರೆ. (ಎಂ.ಎನ್)