ಸುದ್ದಿ ಸಂಕ್ಷಿಪ್ತ

ಪ್ರಶಸ್ತಿಗೆ ಅರ್ಜಿ ಆಹ್ವಾನ      

ಮೈಸೂರು, ಜು,7 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳಾ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿರುವ ಇಬ್ಬರು ವ್ಯಕ್ತಿ ಹಾಗೂ ಎರಡು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ.
ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 25,000/-ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ. 1.00 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ನವೆಂಬರ್ 14 ರಂದು ಆಚರಿಸಲಾಗುವ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆ, ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕಾಂಶ, ಮಕ್ಕಳ ಶಿಕ್ಷಣ, ಕಲೆ, ಸಂಸ್ಕøತಿ, ಕ್ರೀಡೆ, ಅಭಿವೃದ್ದಿ, ವಿಶೇಷ ಮಕ್ಕಳು, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸರಬೇಕು. ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿ.ಎಸ್-1, ಹೈಟೆಂನ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ, 2ನೇ ಹಂತ, ಮೈಸೂರು ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 20 ರೊಳಗಾಗಿ ಸಲ್ಲಿಸುವುದು.  ಮಾಹಿತಿಗೆ ದೂರವಾಣಿ ಸಂಖ್ಯೆ 2498031, 2495432ನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: